ಪೀಠಿಕೆ: ಸಮಾಜಕಾರ್ಯ ಕೇವಲ ಒಂದು ವೃತ್ತಿ ಮಾತ್ರವಾಗಿರದೇ ಅದೊಂದು ಶೈಕ್ಷಣಿಕ ಜ್ಞಾನ ಶಾಖೆಯೂ ಆಗಿದೆ. ಸಮಾಜಕಾರ್ಯ ವೃತ್ತಿಯ ಯಶಸ್ಸು, ಸಮಾಜ ಕಾರ್ಯಕರ್ತನಾದವನು ತರಬೇತಿಯ ವೇಳೆ ಎಷ್ಟರ ಮಟ್ಟಿಗೆ ಅದನ್ನು ಸೈದ್ಧಾಂತಿಕವಾಗಿ, ಪ್ರಾಯೋಗಿಕವಾಗಿ ಅರ್ಥೈಸಿಕೊಂಡು, ಅಳವಡಿಸಿಕೊಳ್ಳುತ್ತಾನೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಸಮಾಜಕಾರ್ಯ ಶಿಕ್ಷಣ ಮೂಲತಃ ಪಾಶ್ಚಾತ್ಯರ ಕೊಡುಗೆಯಾದ್ದರಿಂದ ಭಾರತದ ಸಂದರ್ಭದಲ್ಲಿ ಅದರ ಅನ್ವಯಿಸುವಿಕೆ ದೇಶೀಕರಣಗೊಂಡಿಲ್ಲ. ಸಮಾಜಕಾರ್ಯ ಶಿಕ್ಷಣ ಪರಿಚಿತವಾಗಿ ಎಂಟು ದಶಕಗಳೇ ಕಳೆದಿರುವ ಈ ಹೊತ್ತಿನಲ್ಲಿ ಅದು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಆತ್ಮಾವಲೋಕನ ಅಗತ್ಯ ಮತ್ತು ಅನಿವಾರ್ಯವಾಗಿದೆ. ಸಮಸ್ಯೆಗಳನ್ನು ಪರಿಹರಿಸುವ ವಿಧಾನಗಳಿಗೆ ದಾರಿ ತೊರಿಸುವ ಸಮಾಜಕಾರ್ಯ ಶಿಕ್ಷಣವೇ ಸಮಸ್ಯೆಗಳ ಸುಳಿಗೆ ಸಿಲುಕುತ್ತಿರುವುದು ಕಳವಳಕಾರಿ ಸಂಗತಿ. ಈ ನಿಟ್ಟಿನಲ್ಲಿ ‘ಸಮಾಜ ಕಾರ್ಯ ಶಿಕ್ಷಣದ ಪ್ರಸ್ತುತ ಸಮಸ್ಯೆಗಳ’ ಕುರಿತಾದ ಪ್ರಬಂಧ ಮಂಡನೆ, ಬೆಳಕು ಚೆಲ್ಲುವ ಒಂದು ಚಿಕ್ಕ ಪ್ರಯತ್ನವಾಗಿದೆ. ಭಾರತದಲ್ಲಿ ಸಮಾಜಕಾರ್ಯ ಶಿಕ್ಷಣದ ವಿಕಾಸ ಪ್ರೊ. ಸಂಜಯ ಭಟ್ಟ ಬಹಳ ಸ್ಪಷ್ಟವಾಗಿ ಭಾರತದಲ್ಲಿನ ಸಮಾಜಕಾರ್ಯ ಶಿಕ್ಷಣದ ವಿಕಾಸವನ್ನು ಈ ಕೆಳಗಿನ ಹಂತಗಳಲ್ಲಿ ವರ್ಗೀಕರಿಸಿದ್ದಾರೆ. 1.ಪ್ರಾರಂಭದ ಹಂತ(1936-46): ಈ ಹಂತ ಭಾರತದ ಪ್ರಪ್ರಥಮ ಸಮಾಜಕಾರ್ಯ ಶಾಲೆಯಾದ ‘ಸರ್ ದೊರಾಬ್ಜಿ ಟಾಟಾ ಗ್ರ್ಯಾಜುಯೇಟ್ ಸ್ಕೂಲ್ ಆಫ್ ಸೋಸಿಯ
Comments
Post a Comment